ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುವ ಆತಂಕ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ತುರ್ತು ಸಭೆ ಕರೆದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ ವಿಧಾನಸೌಧದಲ್ಲಿ ಕೋವಿಡ್ ಬಗ್ಗೆ ತುರ್ತು ಸಭೆ ಕರೆದಿದ್ದೇನೆ. ವಿಪತ್ತು ನಿರ್ವಹಣಾ ಸಮಿತಿಯ ಉಪಾಧ್ಯಕ್ಷ ಕೂಡ ನಾನಿರುವುದರಿಂದ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಗಳ ತುರ್ತು ಸಭೆ ಕರೆದಿದ್ದೇನೆ ಎಂದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಕೂಡ ಭಾಗಿಯಾಗುತ್ತಾರೆ. ತುರ್ತಾಗಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು. ಹೊಸ ವರ್ಷಕ್ಕೆ ಕೋವಿಡ್ ನಿಯಮಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.