ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲೇ ಕೇಂದ್ರ ಆರೋಗ್ಯ ಖಾತೆಯ ಇಬ್ಬರು ಸಚಿವರ ರಾಜೀನಾಮೆ ಪಡೆಯಲಾಗಿದೆ.
ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ವಿಫಲ ಹಾಗೂ ಎರಡನೇ ಅಲೆ ಎದುರಿಸಲು ಮಾಡಿಕೊಂಡಿದ್ದ ಪೂರ್ವ ಸಿದ್ಧತೆಯಲ್ಲಿ ಕೊರತೆ ಕಾರಣ ನೀಡಿ ಕೇಂದ್ರ ಆರೋಗ್ಯ ಖಾತೆಯ ಇಬ್ಬರು ಸಚಿವರ ರಾಜೀನಾಮೆ ಪಡೆಯಲಾಗಿದೆ. ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಹರ್ಷವರ್ಧನ್ ಹಾಗೂ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಚೌಬೆ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ʼಕೊರೊನಾʼ ಲಸಿಕೆ ಪರಿಣಾಮಕಾರತ್ವದ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ
ಕೇಂದ್ರ ಸಂಪುಟ ಪುನಾರಚನೆ ಬೆನ್ನಲ್ಲೇ ಹಲವು ಹಿರಿಯ ನಾಯಕರಿಗೆ ಸಂಪುಟದಿಂದ ಕೊಕ್ ನೀಡಲಾಗಿದ್ದು, ಡಿ.ವಿ. ಸದಾನಂದಗೌಡ, ಥಾವರ್ ಚಂದ್ ಗೆಹ್ಲೋಟ್, ರಮೇಶ್ ಪೊಖ್ರಿಯಾಲ್, ಹರ್ಷವರ್ಧನ್, ಅಶ್ವಿನ್ ಚೌಬೆ ಸೇರಿದಂತೆ ಒಟ್ಟು 9 ಸಚಿವರ ರಾಜೀನಾಮೆ ಪಡೆಯಲಾಗಿದೆ.