ತುಮಕೂರು: ಕೊರೊನಾ ಮೂರನೇ ಅಲೆ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲೆಡೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಂಟೇನ್ಮೆಂಟ್ ಜೋನ್ ಮಾಡಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರಯತ್ನಿಸುತ್ತೇವೆ. ಡೆಲ್ಟಾ, ಒಮಿಕ್ರಾನ್ ತಳಿಯೇ ಎಂಬುದನ್ನು ತಿಳಿಯುವ ಪ್ರಯತ್ನ ನಡೆದಿದೆ ಎಂದರು.
ಪಿಂಚಣಿದಾರರು ನ.30 ರೊಳಗೆ ಮಾಡಲೇಬೇಕಿದೆ ಈ ಕೆಲಸ
ಕೇರಳದಿಂದ ಬಂದವರ ಮೇಲೆ ಹಾಗೂ ಏರ್ ಪೋರ್ಟ್ ನಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಶಾಲೆ, ಕಾಲೇಜುಗಳಲ್ಲೂ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.