ಬೆಂಗಳೂರು: ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ನಿಷ್ಕ ವಿವಿದೋದ್ದೇಶ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ 2013ರಲ್ಲಿ ಕೋಟಿ ಕೋಟಿ ವಂಚನೆ ನಡೆದಿತ್ತು. ಆರೋಪಿಗಳು ಸಾವಿರಾರು ಜನರಿಂದ ಹಣ ಕಟ್ಟಿಸಿಕೊಂಡು ಮೋಸ ಮಾಡಿ ಪರಾರಿಯಾಗಿದ್ದರು. ಹನುಮಂತ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ 25 ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕಳೆದ 9 ವರ್ಷಗಳಿಂದ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಕೃಷ್ಣಪ್ಪ, ಧನಂಜಯ, ಚಂದ್ರ, ಪುಟ್ಟರಾಜು ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.