ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಅಭಿನಯ ಅವರಿಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿದೆ.
ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ನಟಿ ಅಭಿನಯ ಹಾಗೂ ಅವರ ತಾಯಿ ಜಯಮ್ಮ ಇಬ್ಬರಿಗೂ ಜೈಲು ಶಿಕ್ಷೆ ವಿಧಿಸಿ, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಟಿ ಅಭಿನಯಾ ಅವರಿಗೆ 2 ವರ್ಷ ಜೈಲು ಶಿಕ್ಷೆ, ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ಅಭಿನಯ ಅವರ ಸಹೋದರ ಚಲುವರಾಜ್ ಗೂ 2 ವರ್ಷ ಜೈಲು ಶಿಕ್ಷೆ ವಿಧಿಸಿ ಪ್ರಕಟವಾಗಿದೆ.
ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮೀ ದೇವಿ ಮೂವರ ವಿರುದ್ಧ ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.