ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ಕೆಡವಿ ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಅಂತಹ ಗೂಂಡಾಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕೆಡವಿ, ವಿರೂಪಗೊಳಿಸಿರುವ ಪುಂಡರನ್ನು ಜೈಲಿಗಟ್ಟಬೇಕು. ಈ ಬಗ್ಗೆ ಪೊಲಿಸರಿಗೆ ಸರ್ಕಾರ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾರುಕಟ್ಟೆಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್
ಸಿಎಂ ಬೊಮ್ಮಾಯಿಯವರೇ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ ಎಂದು ಹೇಳಿದ್ದಾರೆ.