ಬೆಳಗಾವಿ: ಕೋವಿಡ್ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕೊರೊನಾ ನಿಯಂತ್ರಣ ಕುರಿತು ಸುವರ್ಣಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೊಂಚ ಬ್ರೇಕ್ ಹಾಕಲಾಗಿದ್ದು, ಬಹಿರಂಗವಾಗಿ ಪಾರ್ಟಿ ಆಯೋಜನೆ ಮಾಡುವಂತಿಲ್ಲ. ಹೊಸ ವರ್ಷಕ್ಕೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಕ್ರಿಸ್ ಮಸ್ ಹಬ್ಬದಲ್ಲಿ ಚರ್ಚ್ ಗಳಲ್ಲಿ ಪ್ರಾರ್ಥನೆ ಮಾಡಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ತಿಳಿಸಿದರು.
ಗ್ರಾಹಕರಿಗೆ ಖುಷಿ ಸುದ್ದಿ ನೀಡಿದ ನೋಕಿಯಾ..! ಶೀಘ್ರವೇ ಬರಲಿದೆ ಈ ಫೋನ್
ಹೊಸ ವರ್ಷಾಚರಣೆಗೆ ಜನರು ಗುಂಪುಗೂಡುವಂತಿಲ್ಲ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿಯೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಸಾಮೂಹಿಕ ಸಮಾರಂಭ, ಪಾರ್ಟಿ ಆಯೋಜನೆಗೆ ಯಾವುದೇ ಅವಕಾಶವಿಲ್ಲ. ಡಿಸೆಂಬರ್ 30ರಿಂದ ಜನವರಿ 2ರವರೆಗೂ ಈ ನಿಯಮ ಅನ್ವಯವಾಗಲಿದೆ ಎಂದರು.
ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ. ಹೋಟೆಲ್ ಸಿಬ್ಬಂದಿಗಳಿಗೆ 2 ಡೊಸ್ ಲಸಿಕೆ ಕಡ್ಡಾಯವಾಗಿದೆ. ಕೋವಿಡ್ ತಡೆ ನಿಟ್ಟಿನಲ್ಲಿ ಜನರು ಕೂಡ ಸಾಕಷ್ಟು ಜಾಗೃತಿ ವಹಿಸಬೇಕು ಎಂದು ಹೇಳಿದರು.