alex Certify BIG NEWS: ಕ್ರೂಸರ್ ಅಪಘಾತದಲ್ಲಿ 7 ಜನರ ದುರ್ಮರಣ ಕೇಸ್; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರೂಸರ್ ಅಪಘಾತದಲ್ಲಿ 7 ಜನರ ದುರ್ಮರಣ ಕೇಸ್; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಣಬರಗಿ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ 7 ಜನರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಬೆಳಿಗ್ಗೆ ಕ್ರೂಸರ್ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ ಬಗ್ಗೆ ಮಾಹಿತಿ ಬಂದಿದೆ. 14 ಜನರು ಗಾಯಗೊಂಡಿದ್ದಾರೆ. ಈ ದುರಂತ ಆಘಾತವನ್ನುಂಟುಮಾಡಿದೆ. ಮೃತರ ಕುಟುಂಬಕ್ಕೆ ತಲಾ 7 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ʼಸಾಕ್ಸ್ʼ ತೊಳೆಯದೇ ಮೂರ್ನಾಲ್ಕು ದಿನ ಧರಿಸ್ತೀರಾ…? ಹಾಗಿದ್ರೆ ನೀವಿದನ್ನು ಓದ್ಲೇಬೇಕು…!

ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ಹಾಗೂ ಜಿಲ್ಲಾಡಳಿತದ ವತಿಯಿಂದ 2 ಲಕ್ಷ ಒಟ್ಟು 7 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...