ಕೊಪ್ಪಳ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದಲ್ಲಿ ನಡೆದಿದೆ.
ವೃತ್ತ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಪರಸ್ಪರ ವಾಗ್ವಾದ ವಿಕೋಪಕ್ಕೆ ತಿರುಗಿ ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಕ್ಕಪ್ಪ ಶ್ಯಾಮಪ್ಪ ಹಾಗೂ ಬಾಷಾಸಾಬ ಮೃತ ದುರ್ದೈವಿಗಳು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕನಕಗಿರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.