ರಾಜಸ್ಥಾನ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿದ್ದ ತಿಕ್ಕಾಟ ಕೊನೆಗೂ ಬಗೆಹರಿದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಸಚಿನ್ ಪೈಲಟ್ ಇದೀಗ ತಣ್ಣಗಾಗಿದ್ದು, ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ಚುನಾವಣಾ ಕಾರ್ಯತಂತ್ರ ರೂಪಿಸಲು ಇತ್ತೀಚೆಗೆ ಸೇರಿದ್ದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಎಲ್ಲವನ್ನು ಮರೆತು ಕ್ಷಮಿಸಿ ಮುನ್ನಡೆಯಿರಿ ಎಂದು ಸಲಹೆ ರೂಪದಲ್ಲಿ ನಿರ್ದೇಶನ ನೀಡಿದ್ದು ಇದಕ್ಕೆ ಉಭಯ ಬಣಗಳು ಸಹ ಸಮ್ಮತಿಸಿವೆ.
ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಚಿನ್ ಪೈಲಟ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಲಹೆಯಂತೆ ಭಿನ್ನಮತವನ್ನು ನಾವು ಕೈ ಬಿಟ್ಟಿದ್ದೇವೆ. ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದ್ದಾರೆ.