ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್ ಖಾತೆ ಹಂಚಿಕೆ ವಿಚಾರದಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದು, ಪ್ರವಾಸೋದ್ಯಮದ ಬದಲಾಗಿ ತಾವು ಕೇಳಿದ ಖಾತೆ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಶ್ವ ದಾಖಲೆಗೆ ಪಾತ್ರವಾಗಲಿದೆ 2024 ರ ಪ್ಯಾರಿಸ್ ಒಲಿಂಪಿಕ್ಸ್….!
ನಿನ್ನೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಆನಂದ್ ಸಿಂಗ್ ಬಹಿರಂಗವಾಗಿ ತಮಗೆ ದೊರೆತ ಖಾತೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಸಾರಿಗೆ ಇಲಾಖೆ ದೊರೆತ ಬಗ್ಗೆ ಶ್ರೀರಾಮುಲು ಹಾಗೂ ಪೌರಾಡಳಿತ ಖಾತೆ ಬಗ್ಗೆ ಎಂಟಿಬಿ ನಾಗರಾಜ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.
ಒಟ್ಟಾರೆ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಿತ ಸಚಿವರನ್ನು ಸಮಾಧಾನ ಪಡಿಸುವಲ್ಲಿ ಸಿಎಂ ಯಶಸ್ವಿಯಾಗಲಿದ್ದಾರಾ ಕಾದುನೋಡಬೇಕಿದೆ.