ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಲಾಲು ಪ್ರಸಾದ್ ನೇತೃತ್ವದ ಆರ್ ಜೆ ಡಿ ಜೊತೆಗೂಡಿ ಹೊಸ ಸರ್ಕಾರ ರಚಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮುಖಭಂಗವಾಗಿದೆ.
2014ರ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕಾರ್ತಿಕ್ ಕುಮಾರ್, ಪ್ರತಿಪಕ್ಷಗಳು ರಾಜೀನಾಮೆ ಆಗ್ರಹಿಸಿ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾನೂನು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ತಿಕ್ ಕುಮಾರ್ ಅವರ ಖಾತೆ ಬದಲಾಯಿಸಿ ಕಬ್ಬು ಉದ್ಯಮ ಸಚಿವರನ್ನಾಗಿ ಮಾಡಲಾಗಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದೆ.