ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾವ ಮುಂದುವರೆದಿದ್ದು, ಕಾಲೇಜಿಗೆ ರಜೆ ನೀಡಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ಆಗಮಿಸಿದ್ದಾರೆ.
ಕುಂದಾಪುರ, ಉಡುಪಿ ಭಾಗದ ಸರ್ಕಾರಿ ಕಾಲೇಜುಗಳಲ್ಲಿ ಆರಂಭವಾಗಿದ್ದ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಖಾಸಗಿ ಕಾಲೇಜುಗಳಿಗೂ ಲಗ್ಗೆಯಿಡುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದೆ.
ಇಂದು ಕುಂದಾಪುರದ ಆರ್.ಎನ್.ಶೆಟ್ಟಿ ಖಾಸಗಿ ಕಾಲೇಜಿಗೆ ಹಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಇನ್ನು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದ್ದಾರೆ.
ಕೆಲಸದ ಒತ್ತಡದಿಂದ ಉದ್ಯೋಗಿ ಆತ್ಮಹತ್ಯೆ, ಟೊಯೊಟಾ ಕಂಪನಿ ಅಧ್ಯಕ್ಷರಿಂದಲೇ ಕುಟುಂಬದ ಕ್ಷಮೆಯಾಚನೆ
ವಿವಾದದ ಬೆನ್ನಲ್ಲೇ ಇನ್ನೊಂದೆಡೆ ಬಂಡಾರ್ಕರ್ಸ್ ಕಾಲೇಜಿಗೆ ಎರಡು ದಿನ ರಜೆ ಘೋಷಿಸಲಾಗಿದ್ದರೂ ಕೂಡ ಕೇಸರಿ ಶಾಲು ಧರಿಸಿ ಇಂದು ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಶಾಲಾ ಸಿಬ್ಬಂದಿಗಳು ಹಾಗೂ ಪೊಲೀಸರು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ತೆಗಿಸಿ, ಮನೆಗೆ ಹೋಗುವಂತೆ ಸೂಚಿಸಿದ್ದಾರೆ.
ಕಾಲೇಜಿನಿಂದ ತೆರಳಿದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದಾಪುರದ ಬಸ್ ನಿಲ್ದಾಣದ ಬಳಿ ಜಮಾವಣೆಗೊಂಡಿದ್ದು, ಮೆರವಣಿಗೆ ಆರಂಭಿಸಿದ್ದಾರೆ. ಮೆರವಣಿಗೆಯಲ್ಲಿ ಜೈ ಶ್ರೀರಾಮ್, ಹರಹರ ಮಹಾದೇವ್ ಘೋಷಣೆ ಕೂಗಿದ್ದಾರೆ. ಒಟ್ಟಾರೆ ಕರಾವಳಿಯ ಒಂದೋಂದೇ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕ್ಕಕೇರುತ್ತಿದೆ.