alex Certify BIG NEWS: ಖ್ಯಾತ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಬಹುಭಾಷ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿರುವ ವಿನಯಾ ಪ್ರಸಾದ್ ನಿವಾಸದಲ್ಲಿ ಕಳ್ಳರು ಮನೆಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಟಿ ವಿನಯಾ ಪ್ರಸಾದ್ ಉಡುಪಿಗೆ ತೆರಳಿದ್ದರು. ಅ.26ರಂದು ಅವರು ಬೆಂಗಳೂರಿಗೆ ವಾಪಸ್ ಆಗಿದ್ದರು. ಮನೆಗೆ ಬಂದು ನೋಡಿದಾಗ ಮನೆ ಬೀಗ ಮುರಿದು ಕಳ್ಳರು ಒಳನುಗ್ಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಲಾಕರ್ ಓಪನ್ ಮಾಡಿ ಹಣ ದೋಚಿ ಪರಾರಿಯಾಗಿದ್ದಾರೆ.

ಕಳ್ಳತನವಾಗಿರುವ ಬಗ್ಗೆ ವಿನಯಾ ಪ್ರಸಾದ್ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...