alex Certify BIG NEWS: ಖ್ಯಾತ ನಿರ್ದೇಶಕ ಮಣಿರತ್ನಂ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಿರ್ದೇಶಕ ಮಣಿರತ್ನಂ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಅನಾರೋಗ್ಯಕ್ಕೀಡಾಗಿದ್ದು, ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿರತ್ನಂ ಅವರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಭಾಗಿಯಾಗಿದ್ದರು. ಚಿತ್ರ ಬಿಡುಗಡೆಗೆ ಭರ್ಜರಿ ಸಿದ್ಧತೆ ಆರಂಭವಾಗಿರುವಾಗಲೇ ಮಣಿರತ್ನಂ ಅವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದಿದ್ದು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ನಟ, ನಟಿಯರು ಹಾರೈಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...