ಗಂಟು ಬೇನೆಯಿಂದ ಮೃತಪಟ್ಟ ಎತ್ತುಗಳಿಗೆ ತಲಾ 30,000 ರೂ. ಹಾಗೂ ಹಸುವಿಗೆ ತಲಾ 20,000 ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಇಂದು ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಹಾಲು ಉತ್ಪಾದಕರಿಂದ ಹಾಲು ಉತ್ಪಾದಕರಿಗೋಸ್ಕರ ಕ್ಷೀರ ಸಮೃದ್ಧಿ ಬ್ಯಾಂಕ್ ಅನ್ನು ಶೀಘ್ರದಲ್ಲಿಯೇ ಆರಂಭಿಸಲಾಗುತ್ತದೆ ಎಂದು ಹೇಳಿದರು.
ರೈತರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈಗಾಗಲೇ 14 ಲಕ್ಷ ಮಕ್ಕಳು ಈ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.