alex Certify BIG NEWS: ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ; ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ; ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್. ಅಶೋಕ್

ಬೆಂಗಳೂರು: ನಮ್ಮ ಸಿಎಂ ಚಾಣಾಕ್ಯ ವಿದ್ಯೆ ಕಲಿತವರು. ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತೆ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದಿನ ಸರ್ಕಾರಗಳು ಮೀಸಲಾತಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಜೇನುಗೂಡಿಗೆ ಕಲ್ಲು ಹೊಡೆದಂತಾಗುತ್ತದೆ ಎಂದಿದ್ದರು. ಆದರೆ ನಾವು ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಗಂಡೆದೆ ಇರುವವರಿಂದ ಮಾತ್ರ ಇದು ಸಾಧ್ಯ ಎಂದರು.

ಅಂತಹ ಗಂಡೆದೆ ತೋರಿಸಿದವರು ನಮ್ಮ ಸಿಎಂ ಬೊಮ್ಮಾಯಿ. ಚಾಣಕ್ಯತನದಿಂದ ಮೀಸಲಾತಿ ಹೆಚ್ಚಳ ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳನ್ನು ಹಾಡಿಹೊಗಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...