alex Certify BIG NEWS: ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ; ಟ್ರೇಲರ್ ನೋಡಿ ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ; ಟ್ರೇಲರ್ ನೋಡಿ ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪವರ್ ಸ್ಟಾರ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಗಂಧದಗುಡಿ ಸಾಕ್ಷ್ಯಚಿತ್ರ ಟ್ರೇಲರ್ ಬಿಡುಗಡೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ‌. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ ಎಂದು ಹೇಳಿದ್ದಾರೆ.

ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ‌ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪಿ ಆರ್ ಕೆ ಪ್ರೊಡಕ್ಷನ್ ಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...