ಮೈಸೂರು; ಇಂದು ರಾಜ್ಯಾದ್ಯಂತ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಯಾಗಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಚಿತ್ರಮಂದಿರಗಳತ್ತ ಧಾವಿಸಿದ್ದಾರೆ.
ಗಂಧದಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿರುವ ನಿಮಿಷಾಂಬಾ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಗಂಧದಗುಡಿ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಆಗಿದ್ದು, ಪಿ ಆರ್ ಕೆ ಪ್ರೊಡಕ್ಷನ್ ನಲ್ಲಿ ಹಾಗೂ ಅಮೋಘವರ್ಷ ಅವರ ನಿರ್ದೇಶನದಲ್ಲಿ ಕರ್ನಾಟಕದ ಪ್ರಕೃತಿ ಸೌಂದರ್ಯ ಕುರಿತ ಸಾಕ್ಷ್ಯ ಚಿತ್ರ ಮೂಡಿಬಂದಿದೆ.