alex Certify BIG NEWS: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲಿಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಮಹಾರಾಷ್ಟ್ರದ ಮೀರಜ್ ನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಬೆಳಗಾವಿ ಪೊಲೀಸರು ಮುಂಜಾಗೃತಾ ಕ್ರಮವಾಗಿ ಮೀರಜ್ ಹಾಗೂ ಕಾಗವಾಡ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚ ವಹಿಸುವಂತೆ ಸೂಚಿಸಿದ್ದಾರೆ.

ಶಾಂತಿ ಕಾಪಾಡಲು ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಶೀಘ್ರವೇ ಎರಡೂ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...