alex Certify BIG NEWS: ಗಡಿ ವಿವಾದ ತಾರಕಕ್ಕೆ; ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣ; ಶರದ್ ಪವಾರ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಡಿ ವಿವಾದ ತಾರಕಕ್ಕೆ; ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣ; ಶರದ್ ಪವಾರ್ ಗಂಭೀರ ಆರೋಪ

ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗಳಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.

ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್, ಗಡಿ ವಿವಾದ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕ ಸಿಎಂ ಬೊಮ್ಮಾಯಿ ಅವರ ಹೇಳಿಕೆಯಿಂದಲೇ ಈ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಶಾಂತ ವಾತಾವರಣ ನಿರ್ಮಾಣ ಮಾಡಲಿ ಇಲ್ಲವಾದಲ್ಲಿ ನಾವೂ ತಾಳ್ಮೆ ಕಳೆದುಕೊಳ್ಳಬೇಕಾಗುತ್ತದೆ. ಏನಾದರೂ ಅನಾಹುತವಾದರೆ ಅದಕ್ಕೆ ಸಿಎಂ ಬೊಮ್ಮಾಯಿ ಅವರೇ ನೇರ ಹೊಣೆ ಎಂದು ಗದರಿದ್ದಾರೆ.

ಎಂಇಎಸ್ ನಾಯಕರನ್ನು ಭೇಟಿಯಾಗಿ ಅವರ ಸಮಸ್ಯೆಯನ್ನು ತಿಳಿದುಕೊಳ್ಳುತ್ತೇನೆ. ಈ ರೀತಿ ಘಟನೆಗಳು ದೇಶಕ್ಕೆ ಮಾರಕ. ಕರ್ನಾಟಕ ಸಿಎಂ ಗಡಿ ವಿವಾದ ಆರಂಭ ಮಾಡಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಪ್ರಕರಣ ಮುಗಿಯದಿದ್ದರೆ ನಾನೇ ಬೆಳಗಾವಿಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...