ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕೊಂಚ ತಣ್ಣಗಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸಚಿವರು ಮತ್ತೆ ಕರ್ನಾಟಕಕ್ಕೆ ಬರುವುದಾಗಿ ಹೇಳಿಕೆ ಕೊಟ್ಟಿದ್ದಾರೆ.
ಎಂಇಎಸ್ ಪುಂಡರು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ಅವರನ್ನು ಭೇಟಿಯಾಗಿ ಆಹ್ವಾನಿಸಿದ್ದು, ಬೆಳಗಾವಿಗೆ ಬರುವುದಾಗಿ ಸಚಿವರು ಆಶ್ವಾಸನೆ ನೀಡಿದ್ದಾರೆ.
ಬೆಳಗಾವಿ ಗಡಿಗೆ ಹೊಂದಿಕೊಂಡಿದ್ದ ಶಿನ್ನೊಳ್ಳಿ ಗ್ರಾಮಕ್ಕೆ ಗ್ರಾಮ ಪಂಚಾಯತ್ ಚುನಾವಣಾ ಪ್ರಚಾರಕ್ಕೆ ಸಚಿವ ಶಂಭುರಾಜ್ ದೇಸಾಯಿ ಆಗಮಿಸಿದ್ದರು. ಈ ವೇಳೆ ಎಂಇಎಸ್ ಸಚಿವರನ್ನು ಭೇಟಿಯಾಗಿ ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದು, ನಾಗ್ಪುರ ಅಧಿವೇಶನ ಮುಗಿಸಿ ಬೆಳಗಾವಿಗೆ ಬರುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಸಚಿವರು ಆಶ್ವಾಸನೇ ನೀಡುತ್ತಿದ್ದಂತೆ ಎಂಇಎಸ್ ಪುಂಡರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಖಾನಾಪುರಗಳನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ.