ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರುತ್ತಿದ್ದಂತೆ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ಗಡಿ ಸಮನ್ವಯ ಸಮಿತಿ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಬುರಾಜ್ ದೇಸಾಯಿ ಅವರಿಗೆ ಪತ್ರ ಬರೆದಿದೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿವಾದ ಕುರಿತ ವಿಚಾರಣೆ ನಡೆಯಲಿದೆ. ಮಹಾರಾಷ್ಟ್ರ ಸರ್ಕಾರ ಗಡಿ ಸಮನ್ವಯ ಸಮಿತಿ ರಚನೆ ಮಾಡಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿ ಇಬ್ಬರೂ ಸಚಿವರು ಗಡಿ ವಿವಾದ ಚರ್ಚಿಸಲಿ ಎಂದು ಎಂಇಎಸ್ ಪತ್ರ ಬರೆದಿದೆ.
ಅಲ್ಲದೇ ಗಡಿ ವಿವಾದ ವಿಚಾರವಾಗಿ ಎಂಇಎಸ್ ಕಾರ್ಯಕರ್ತರ ಜೊತೆ ಚರ್ಚಿಸಲಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.