ಹಾವೇರಿ: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಭಾಗವಹಿಸಲು ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ಕರ್ನಾಟಕ, ಕನ್ನಡದ ವಿಚಾರದಲ್ಲಿ ಯಾಕೆ ಈ ರೀತಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬುದು ಗೊತ್ತಿಲ್ಲ. ಯಾವ ಆಧಾರದಲ್ಲಿ ಕರ್ನಾಟಕ ಸ್ತಬ್ಧಚಿತ್ರ ತಿರಸ್ಕರಿಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.
ನಾನೇ ದೆಹಲಿಗೆ ಹೋಗಿ ಸರಿ ಮಾಡುವ ಪ್ರಯತ್ನ ಮಾಡುತ್ತೇನೆ. ಕೇಂದ್ರ ಸರ್ಕಾರದ ನೌಕರಿಗಳಲ್ಲಿಯೂ ಕನ್ನಡಿಗರನ್ನು ಕಡೆಗಣಿಸುತ್ತಿದೆ. ಕನ್ನಡಿಗರಿಗೆ ಪದೇ ಪದೇ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.