alex Certify BREAKING: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರದಿಂದ ನಿರಾಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರದಿಂದ ನಿರಾಕರಣೆ

ಈ ಬಾರಿ ನವ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ಇತರ ರಾಜ್ಯಗಳಿಗೆ ಅವಕಾಶ ಕೊಡುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರ ಈ ಬಾರಿ ನಾರಿ ಶಕ್ತಿ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲು ಸಿದ್ಧತೆ ನಡೆಸಿದ್ದು, ಆದರೆ ಅಂತಿಮ ಹಂತದಲ್ಲಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ.

ಕಳೆದ 13 ವರ್ಷಗಳಿಂದಲೂ ನಿರಂತರವಾಗಿ ಕರ್ನಾಟಕ ಸರ್ಕಾರ ಸ್ತಬ್ಧ ಚಿತ್ರ ಪ್ರದರ್ಶನ ಮಾಡಿಕೊಂಡು ಬಂದಿದ್ದು, ಆದರೆ ಈ ಬಾರಿ ಅವಕಾಶ ಸಿಕ್ಕಿಲ್ಲ.

ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಅವಕಾಶ ನೀಡದಿದ್ದರೆ ರಾಜ್ಯದಾದ್ಯಂತ ಧರಣಿ ನಡೆಸಲಾಗುವುದು ಎಂದು ಪ್ರವೀಣ್ ಶೆಟ್ಟಿ ಬಣ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...