ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಪ್ರತ್ಯೇಕ ಷರತ್ತುಗಳನ್ನು ವಿಧಿಸಿದ್ದು, ಪಾಲಿಕೆ ನಿಯಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ವಿ.ಹೆಚ್.ಪಿ., ಭಜರಂಗದಳ ಕಾರ್ಯಕರ್ತರು ಗಣೇಶ ಹಬ್ಬ ಆಚರಣೆಗೆ ವಿಧಿಸಿರುವ ಷರತ್ತುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಸಿಹಿ ಖಾದ್ಯಕ್ಕೆ ಹೊಸ ಟಚ್: ಗುಲಾಬ್ ಜಾಮೂನ್ ಅಲ್ಲ ರಮ್ ಬಾಲ್..!
ವಾರ್ಡಿಗೆ ಒಂದರಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೂರು ಅಡಿಗಿಂತ ಎತ್ತರದ ಗಣೇಶ ಮೂರ್ತಿಗೆ ನಿರ್ಬಂಧ, ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಸೇರಿದಂತೆ ಬಿಬಿಎಂಪಿ ವಿಧಿಸಿರುವ ಷರತ್ತುಗಳನ್ನು ವಾಪಸ್ ಪಡೆದುಕೊಳ್ಳಬೇಕು.
ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಮತಿ ನೀಡಬೇಕು. ಒಂದು ವೇಳೆ ಅನುಮತಿ ನೀಡದಿದ್ದರೆ ನಿಯಮ, ಷರತ್ತುಗಳನ್ನು ಉಲ್ಲಂಘಿಸಿ ಗಣೇಶೋತ್ಸವ ಆಚರಣೆ ಮಾಡುವುದಾಗಿ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದಾರೆ. ಸರ್ಕಾರದ ಆದೇಶದ ಪ್ರಕಾರ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಆದರೆ ಕೋವಿಡ್ ನಂತ ಸಾಂಕ್ರಾಮಿಕ ರೋಗದ ಭೀತಿ ಸಂದರ್ಭದಲ್ಲಿ ಮುಂಜಾಗೃತಾ ಕ್ರಮವಾಗಿ ಸರ್ಕಾರ ನಿಯಮಗಳನ್ನು ರೂಪಿಸಿರುವಾಗ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.