ಮಂಗಳೂರು: ಗರ್ಭಿಣಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ಮಂಗಳೂರಿನ ಬಜಪೆ ಪೊಲೀಸರು ಬಂಧಿಸಿದ್ದಾರೆ.
ಸುನೀಲ್ ಬಜಿಲಕೇರಿ, ಚಿರತೆ ಚಿತ್ರ ಬಳಸಿ ಗರ್ಭಿಣಿ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ನಮೀಬಿಯಾ ಚೀತಾಗೆ ಸೀಮಂತ ಯಾವಾಗ? ಎಂದು ಗರ್ಭಿಣಿ ಫೋಟೋಗೆ ಚೀತಾ ಮುಖ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದರು.
ಗರ್ಭಿಣಿ ಹಾಗೂ ಭಾರತೀಯ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂದು ಎಡಪದವು ಗ್ರಾಮದ ಮಹಿಳೆ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಅಲ್ಲದೇ ಸುನೀಲ್, ಬಿಜೆಪಿ ನಾಯಕರು ಹಾಗೂ ಇತ್ತೀಚೆಗೆ ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳ ಬಗ್ಗೆಯೂ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ್ದರು. ಇದೀಗ ಪ್ರಕರಣ ಸಂಬಂಧ ಸುನೀಲ್ ಬಜಿಲಕೇರಿಯನ್ನು ಪೊಲೀಸರು ಬಂಧಿಸಿದ್ದಾರೆ.