ಲಖನೌ: ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮುಖಂಡರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಬೆನ್ನಲ್ಲೇ ಎಚ್ಚೆತ್ತ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ, ಗಲಭೆಕೋರರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್, ಲಖನೌ ಸೇರಿದಂತೆ ಹಲವೆಡೆಗಳಲ್ಲಿ ಪ್ರತಿಭಟನೆ ವೇಳೆ ಉದ್ರಿಕ್ತರ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವವರ ಮನೆಗಳನ್ನು ನೆಲಸಮ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಹಿಂಸಾಚಾರದ ಪ್ರಮುಖ ಆರೋಪಿ ಜಾಫರ್ ಹಶ್ಮಿಯ ಕಾನ್ಪುರದಲ್ಲಿನ ಮನೆಗೆ ಜೆಸಿಬಿ ನುಗ್ಗಿಸಿ, ಮನೆ ನೆಲಸಮಗೊಳಿಸಿದೆ. ಘಟನೆ ನಡೆದು ಒಂದು ದಿನದ ಬಳಿಕ ಯುಪಿ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಈ ಮೂಲಕ ಗಲಭೆಕೋರರಿಗೆ ಖಡಕ್ ಎಚ್ಚರಿಕೆ ನೀಡಿದೆ.