alex Certify BIG NEWS: ಗಾಂಜಾ ಪ್ರಕರಣ; ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಾಂಜಾ ಪ್ರಕರಣ; ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿ ಬಂಧನ

ಮಂಗಳೂರು: ಗಾಂಜಾ ಹಾಗೂ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೆಡಿಕಲ್ ಕಾಲೇಜುಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಇದೀಗ ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಮಂಗಳೂರು ಕೆಎಂಸಿ ವೈದ್ಯಕೀಯ ವಿದ್ಯಾರ್ಥಿ ಡಾ.ವಿ.ಎಸ್.ಹರ್ಷಕುಮಾರ್ ಬಂಧಿತ ಆರೊಪಿ. ಕೆಎಂಸಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ.

ಡಾ.ವಿ.ಎಸ್.ಹರ್ಷಕುಮಾರ್ ತುಮಕೂರು ಮೂಲದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಡ್ರಗ್ಸ್, ಗಾಂಜಾ ಪ್ರಕರಣ ಸಂಬಂಧ ನಿನ್ನೆಯಷ್ಟೇ ಮಂಗಳೂರು ಪೊಲಿಸರು ಇಬ್ಬರು ವೈದ್ಯರು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ 10 ಜನರನ್ನು ಬಂಧಿಸಿದ್ದರು. ಇಂದು ಮತ್ತೋರ್ವ ಮೆಡಿಕಲ್ ವಿದ್ಯಾರ್ಥಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...