ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸಬರಾಜ್ ಬೊಮ್ಮಾಯಿ, ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರ 40% ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿರುವ ರಾಹುಲ್ ಹೇಳಿಕೆಗೆ ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಟಾಂಗ್ ನೀಡಿದರು.
ಬಿಜೆಪಿ ಸರ್ಕಾರದ ಬಗ್ಗೆ ಆರೋಪ ಮಾಡಲು ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಇದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿ.ಕೆ. ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು. 40% ಆರೋಪಕ್ಕೆ ನಿಮ್ಮ ಬಳಿ ದಾಖಲೆ ಇದ್ದರೆ ಕೊಡಿ ತನಿಖೆ ನಡೆಸುತ್ತೇನೆ ಎಂದು ಹೇಳಿದರು.