alex Certify BIG NEWS: ಗುಜರಾತ್ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುಜರಾತ್ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಅವರನ್ನು ಸೇರಿಸಲಾಗಿದೆ.

ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಸ್ಮೃತಿ ಇರಾನಿ ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಸ್ಟಾರ್ ಪ್ರಚಾರಕರಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಹೆಸರನ್ನೂ ಸೇರಿಸಲಾಗಿದೆ. ಇವರಿಬ್ಬರೂ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು.

ಭೋಜ್‌ಪುರಿ ಗಾಯಕರು ಮತ್ತು ಪಕ್ಷದ ಸಂಸದರಾದ ಮನೋಜ್ ತಿವಾರಿ, ನಟ-ರಾಜಕಾರಣಿ ರವಿ ಕಿಶನ್ ಮತ್ತು ಗಾಯಕ-ರಾಜಕಾರಣಿ ದಿನೇಶ್ ಲಾಲ್ ಯಾದವ್ ಕೂಡ ಪಟ್ಟಿಯಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...