alex Certify BIG NEWS: ಗುಜರಾತ್ ವಿಧಾನಸಭಾ ಚುನಾವಣೆ; ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುಜರಾತ್ ವಿಧಾನಸಭಾ ಚುನಾವಣೆ; ದಿನಾಂಕ ಘೋಷಣೆ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ನಲ್ಲಿ ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಹಾಗೂ ಡಿಸೆಂಬರ್ 5ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದರು.

ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಮತದಾರರಿಗಾಗಿ ಒಟ್ಟು 51 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸ್ಥಾಪಿಸಲಾಗುವುದು ಎಂದು ಹೇಳಿದರು.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು 92 ಸದಸ್ಯರ ಬೆಂಬಲ ಬೇಕಿದೆ. ಆಡತಾರೂಢ ಬಿಜೆಪಿ 111, ಕಾಂಗ್ರೆಸ್ 62 ಸದಸ್ಯ ಬಲ ಹೊಂದಿದ್ದು, ಐದು ಶಾನಗಳು ವಿವಿಧ ಕಾರಣಗಳಿಂದ ತೆರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...