ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಗಾಂಧಿನಗರದ ನೂತನ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಅವರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಭೂಪೇಂದ್ರ ಪಟೇಲ್, ಈಶ್ವರನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕನು ದೇಸಾಯಿ, ಋಷಿಕೇಶ್ ಪಟೇಲ್, ಅಯ್ಯರ್ ಬೇರಾ, ಕುಬೇರ್ ಬಾಯ್, ಪುರುಷೋತ್ತಮ್ ಸೋಲಂಕಿ, ಜಗದೀಶ್ ವಿಶ್ವಕರ್ಮ ಸೇರಿದಂತೆ ಹಲವು ನೂತನ ಶಾಸಕರು ಸಚಿವರಾಗಿ ಇದೇ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ,ರಾಜನಾಥ್ ಸಿಂಗ್, ಸೃತಿ ಇರಾನಿ ಮೊದಲಾದ ನಾಯಕರು ಉಪಸ್ಥಿತರಿದ್ದಾರೆ.