ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ರಾಜಿನಾಮೆ ನೀಡಿದ್ದಾರೆ. ಅಹಮದಾಬಾದ್ ನ ರಾಜಭವನದಲ್ಲಿ ರಾಜ್ಯಪಾಲ ದೇವವ್ರತ್ ಅವರನ್ನು ಭೇಟಿಯಾದ ಭೂಪೇಂದ್ರ ಪಟೇಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭೂಪೇಂದ್ರ ಪಟೇಲ್ ನೇತೃತ್ವದ ಆಡಳಿತ ಪಕ್ಷ ಬಿಜೆಪಿ 156 ಕ್ಷೇತ್ರಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಡಿಸೆಂಬರ್ 12ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರಸ್ತುತ ವಿಧಾನಸಭಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಟೇಲ್ ರಾಜೀನಾಮೆ ನೀಡಿದ್ದು, ಹೊಸ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಡಿಸೆಂಬರ್ 12ರಂದು ಅಹಮದಾಬಾದ್ ನ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಮತ್ತೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.