ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಗುತ್ತಿಗೆದಾರ ಕೆಂಪಣ್ಣ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ 40% ಲಂಚ ಆರೋಪ ಮಾಡಿದ್ದರು. ಕೆಂಪಣ್ಣ ಹಾಗೂ ಇತರರ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಇದೀಗ ಕೆಂಪಣ್ಣ ಹಾಗೂ ಇತರರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.
ಪ್ರಕರಣದ ವಿಚಾರಣೆಯಿಂದ ಗೈರಾದ ಹಿನ್ನೆಲೆಯಲ್ಲಿ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ವಿರುದ್ಧ ವಾರೆಂಟ್ ಜಾರಿ ಮಾಡಿದೆ.