ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ.
ಪ್ರಕರಣದಲ್ಲಿ ಖುದ್ದು ತನಿಖಾಧಿಕಾರಿಯೇ ಸಾಕ್ಷ ಹಾಜರುಪಡಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ತನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ ಈಶ್ವರಪ್ಪ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಾಧಾರಗಳು ಸಿಗದ ಕಾರಣ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಇದೀಗ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.