ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಹಿಂದಿನ ಕೈವಾಡದ ಬಗ್ಗೆ ಪತ್ತೆ ಹಚ್ಚಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಹರ್ಷ ಕೊಲೆ ಹಿಂದೆ ಯಾರು ಷಡ್ಯಂತ್ರ ನಡೆಸಿದ್ದಾರೆ ಎಂಬ ಬಗ್ಗೆ ತನಿಖೆಯಾಗುತ್ತಿದೆ. ಕೆಲ ಮುಸ್ಲಿಂ ಗೂಂಡಾಗಳನ್ನು ಬಂಧಿಸಲಾಗಿದೆ. ಇಷ್ಟಾದರೂ ಶಿವಮೊಗ್ಗದಲ್ಲಿ ಗೂಂಡಾ ಮುಸ್ಲಿಂರ ಮಾನಸಿಕತೆ ಇನ್ನೂ ಕಡಿಮೆಯಾಗಿಲ್ಲ. ಬಿಜೆಪಿ ಮುಖಂಡನ ಸಹೋದರನ ಮೇಲೆ ಮೂರ್ನಾಲ್ಕು ಮುಸ್ಲಿಂ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದರು.
ಅದೃಷ್ಟ ಅಂದ್ರೆ ಇದಪ್ಪಾ….! ಲಾಟರಿಯಲ್ಲಿ ಕೋಟಿ ರೂ. ಗೆದ್ದ ಬಾಣಸಿಗ
ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದ್ದು, ವೆಂಕಟೇಶ್ ಮೃತಪಟ್ಟಿದ್ದಾರೆ ಎಂದು ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ. ಈ ಹಲ್ಲೆ ಕೇಸ್ ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೆಲ ಮುಸ್ಲಿಂ ಗೂಂಡಾಗಳಿಂದಾಗಿ ಇಡೀ ಮುಸ್ಲಿಂ ಸಮುದಾಯದವರ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆ ಸಮುದಾಯದ ಮುಖಂಡರು ಗಮನಹರಿಸಬೇಕು. ಅಂತಹ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ವಿರುದ್ಧವೂ ಗುಡುಗಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರು ಮೇಕೆದಾಟು ಎಂದು ಕುಣಿಯುತ್ತಾ ಹೋಗುತ್ತಿದ್ದಾರೆ. ಹಿಜಾಬ್ ವಿಚಾರದಿಂದ ಬೇರೆಡೆ ಗಮನ ಸೆಳೆಯಲು ಪಾದಯಾತ್ರೆ ನಾಟಕವಾಡುತ್ತಿದ್ದಾರೆ ಎಂದು ಹೇಳಿದರು.