
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ.
ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ಯಾವ ರೀತಿಯಾಗಿರಲಿದೆ ? ಯಾವೆಲ್ಲ ದಾಖಲೆಗಳ ಅಗತ್ಯವಿದೆ ಎಂಬ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟ ಚಿತ್ರಣವಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ.
