ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 14ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂದು 10ರಿಂದ 15 ಮಂದಿ ಫಲಾನುಭವಿಗಳನ್ನು ಗುರುತಿಸಿ ಸಾಂಕೇತಿಕವಾಗಿ ಅವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಜುಲೈ 17ರಿಂದ ಪೂರ್ಣ ಪ್ರಮಾಣದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಅರ್ಜಿ ಸಲ್ಲಿಕೆಯಾಗುತ್ತಿದ್ದಂತೆ ಪರಿಶೀಲಿಸಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದಂತೆ ವಾಯ್ಸ್ ರೆಕಾರ್ಡ್ ಕರೆ ಬರುತ್ತದೆ ಎಂದು ಹೇಳಲಾಗಿದೆ.