ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಡ ಕುಟುಂಬಗಳ ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ವೆಚ್ಚ ನಿರ್ವಹಣೆಗೆ ಆರ್ಥಿಕ ನೆರವು ನೀಡುವ ‘ಗೃಹಿಣಿ ಶಕ್ತಿ’ ಯೋಜನೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ.
ಕೋವಿಡ್ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳ ಮನೆ ವೆಚ್ಚ ನಿರ್ವಹಣೆಗಾಗಿ ‘ಗೃಹಿಣಿ ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗುತ್ತಿದ್ದು, ಮನೆಯ ಮುಖ್ಯಸ್ಥರಾದ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಹಾಕಲಾಗುತ್ತದೆ.
ಮೂಲಗಳ ಪ್ರಕಾರ ಮಹಿಳೆಯರಿಗೆ ಮನೆ ನಿರ್ವಹಣೆಯ ವೆಚ್ಚ ಭರಿಸಲು ಅನುಕೂಲವಾಗುವಂತೆ ಮಾಸಿಕ 1 ಸಾವಿರ ರೂಪಾಯಿಗಳಿಂದ 3 ಸಾವಿರ ರೂಪಾಯಿಗಳವರೆಗೆ ನೆರವು ನೀಡುವ ಯೋಜನೆ ಇದಾಗಿದ್ದು, ಫೆಬ್ರವರಿ 17ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಈ ಕುರಿತು ಮಹತ್ವದ ಘೋಷಣೆ ಹೊರಬೀಳಲಿದೆ.