ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ಹಿಂದೂ ಸಂಘಟನೆ ಮುಖಂಡರು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿಯಾದ ಬಳಿಕ ಮಾತನಾಡಿದ ಹಿಂದೂ ಜನಜಾಗೃತಿ ಸಮೀತಿ ರಾಜ್ಯ ಸಂಚಾಲಕ ಮೋಹನ್ ಗೌಡ, ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ಜಾರಿಗೊಳಿಸಬೇಕು. ಅಲ್ಲದೇ ವಿಶೇಷ ಪೊಲೀಸ್ ದಳ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ.
ನಮ್ಮ ಮನವಿಗೆ ಗೃಹ ಸಚಿವರು ಸೂಕ್ತವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.