ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ವಿವಿಐಪಿಗಳಿಗೆ ನಿವೇಶನ ಹಂಚಿಕೆ ಮಾಡಿರುವ ಬಿಡಿಎ ಕ್ರಮದ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಹಲವು ಸಚಿವರು, ವಿವಿಐಪಿಗಳಿಗೆ ಪರ್ಯಾಯ ನಿವೇಶನ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ರಾಜೇಶ್ ಗೌಡ ಅವರನ್ನು ಆಯುಕ್ತರ ಹುದ್ದೆಯಿಂದ ಸ್ಥಳಾಂತರಿಸುವಂತೆ ಮೌಖಿಕ ಸೂಚನೆ ನೀಡಿದೆ.
ಇಂದಿನಿಂದ ಆಯುಕ್ತ ರಾಜೇಶ್ ಗೌಡ ಅವರು ಯಾವುದೇ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ ಎಂದು ಖಡಕ್ ಆಗಿ ಸೂಚಿಸಿದೆ. ಇನ್ನು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬಿಡಿಎ ಕಾರ್ಯದರ್ಶಿ, ಉಪ ಕಾರ್ಯದರ್ಶಿಯನ್ನು ಬದಲಿಸುವಂತೆ ತಿಳಿಸಿದೆ.