alex Certify BIG NEWS: ಗೃಹ ಸಚಿವರ ಎದುರಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವರ ಎದುರಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ

ತುಮಕೂರು: ವಸತಿ ಶಾಲೆ ಉದ್ಘಾಟನೆಯ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಮ್ಮುಖದಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ವಸತಿ ಶಾಲೆ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. ಸರ್ಕಾರಿ ಕಾರ್ಯಕ್ರಮಕ್ಕೆ ಕೇಸರಿ ಶಾಲು ಯಾಕೆ ಹಾಕಿಕೊಂಡು ಬಂದಿದ್ದೀರಾ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ನೂಕಾಟ-ತಳ್ಳಾಟ ನಡೆದಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರನ್ನು ಹೊರಗೆ ಕಳುಹಿಸಿ ಬಳಿಕ ಶಾಲೆ ಉದ್ಘಾಟನೆ ನೆರವೇರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...