alex Certify BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಡ ಹಗಲೇ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ.

ರೌಡಿ ಶೀಟರ್ ಹಂದಿ ಹಣ್ಣಿಯನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ವಿನೋಬಾನಗರದಲ್ಲಿ ಇಂದು ಬೆಳಿಗ್ಗೆ 10:30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ಇನೋವಾ ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ಹಂದಿ ಹಣ್ಣಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಚ್ಚಿ ಕೊಲೆಗೈದಿದ್ದಾರೆ. ರೌಡಿ ಶೀಟರ್ ಹಂದಿ ಹಣ್ಣಿ ಗಾಯಗೊಂಡು ರಕ್ತದ ಮಡುವಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಾಗರ ರಸ್ತೆ ಮಾರ್ಗದಲ್ಲಿದ್ದ ಜಮೀನು ವಿಚಾರವಾಗಿ ಹಂದಿ ಹಣ್ಣಿ ಹಾಗೂ ಕೆಲವರ ಜೊತೆ ವಿವಾದ ನಡೆದಿತ್ತು. ಇದೇ ಕಾರಣಕ್ಕಾಗಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ವಿನೋಬಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...