ತುಮಕೂರು: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕ ಎ ಎಸ್ ಪಿ ಉದೇಶ್ ಅವರಿಗೆ ದೂರು ನೀಡಿದೆ.
ಚಂದ್ರು ಕೊಲೆ ಪ್ರಕರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದಲ್ಲದೇ ಕೋಮು ಗಲಭೆ ಸೃಷ್ಟಿಸುವ ಉದ್ದೇಶದ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ.
BIG BREAKING: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI
ಚಂದ್ರು ಕೊಲೆ ಪ್ರಕರಣ ಕುರಿತು ಮಾತನಾಡಿದ್ದ ಗೃಹ ಸಚಿವರು ಉರ್ದು ಭಾಷೆ ಮಾತನಾಡದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಇದೀಗ ತುಮಕೂರು ಯುವ ಕಾಂಗ್ರೆಸ್ ಘಟಕ ಸಚಿವರ ವಿರುದ್ಧ ದೂರು ನೀಡಿದೆ.