ಬೆಂಗಳೂರು: ಅಕ್ರಮವಾಗಿ ಬಿಡಿಎ ಬದಲಿ ಸೈಟ್ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಮ್ ಆದ್ಮಿ ಪಕ್ಷ ಲೋಕಾಯುಕ್ತಕ್ಕೆ ದೂರು ನೀಡಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ನಾಲ್ವರು ಬಿಡಿಎಯಿಂದ ಪರ್ಯಾಯ ನಿವೇಶನಗಳನ್ನು ಪಡೆದಿದ್ದಾರೆ. ಬಿಡಿಎ ಜಿ ಕೆಟಗರಿ ನಿವೇಶನ ಹಂಚಿಕೆ ಕಾನೂನು ಬಾಹಿರ ಎಂದು ನ್ಯಾಯಾಲಯ ಹೇಳಿದ್ದರೂ ಸಚಿವರ ಒತ್ತಡಕ್ಕೆ ಮಣಿದು ಬಿಡಿಎ ಆಯುಕ್ತರು ನಿವೇಶನ ಹಂಚುವ ಮೂಲಕ ಕೋಟೀ ಕೋಟಿ ರೂಪಾಯಿ ನಷ್ಟವುಂಟು ಮಾಡಿದ್ದಾರೆ. ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ಆಪ್ ಮುಖಂಡ ಮಥಾಯಿ ಹೇಳಿದ್ದಾರೆ.
ಗೃಹ ಸಚಿವರೇ ಕಾನೂನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಸಚಿವ ಸ್ಥಾನದಿಂದ ಸಿಎಂ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.