ಮೈಸೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮೊದಲು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಿ ಎಸ್ ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿಯನ್ನು ಈಗ ಬಂಧಿಸಿದ್ದಾರೆ. ಇಷ್ಟು ದಿನ ಯಾಕೆ ಬಂದಿಸಿಲ್ಲ. ಪ್ರಕರಣದಲ್ಲಿ ಗೃಹ ಸಚಿವರು ಭಾಗಿಯಾಗಿದ್ದಾರೆ. ಅವರು ಮೊದಲು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ದೇವಾಲಯ ಸ್ಥಳಾಂತರ ವಿರೋಧಿಸಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಇದೇ ವೇಳೆ ಸಿದ್ದರಾಮಯ್ಯನವರಿಗೆ ಚುನಾವಣೆಗೆ ಸ್ಪರ್ಧಿಸಲು ನಿರ್ಧಿಷ್ಟ ಕ್ಷೇತ್ರವಿಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಾದಾಮಿ ಕ್ಷೇತ್ರ ಇದೆಯಲ್ಲ ಎಂದು ತಿರುಗೇಟು ನೀಡಿದರು.
ನಾನು ಬಾದಾಮಿಯಿಂದ ಗೆದ್ದಿದ್ದೇನೆ. ಬಾದಾಮಿಯಿಂದ ಸ್ಪರ್ಧಿಸುತ್ತೇನೆ. ವರುಣಾದಿಂದಲೂ ಸ್ಪರ್ದಿಸಿ ಎಂದು ಹೇಳುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿಯಿಂದಲೂ ಸ್ಪರ್ಧಿಸುವಂತೆ ಕರೆ ಬಂದಿದೆ. 20 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಕರೆ ಬರುತ್ತಿದೆ. ಚುನಾವಣೆ ಹತ್ತಿರ ಬಂದಾಗ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳುತ್ತೇನೆ ಎಂದರು.