alex Certify BIG NEWS: ಗೆಲ್ಲುವ ವಿಶ್ವಾಸವಿಲ್ಲದೇ ಕ್ಷೇತ್ರ ಬದಲು; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೆಲ್ಲುವ ವಿಶ್ವಾಸವಿಲ್ಲದೇ ಕ್ಷೇತ್ರ ಬದಲು; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ ಬಾದಾಮಿ ಬಿಟ್ಟು ಬೇರೆ ಕ್ಷೇತ್ರಕ್ಕೆ ಯಾಕೆ ಹೋಗ್ತಿದ್ದಾರೆ ಗೊತ್ತಿಲ್ಲ. ಎಲ್ಲೋ ಒಂದುಕಡೆ ಅವರಿಗೆ ಸೋಲುವ ಭೀತಿ ಎದುರಾಗಿದೆ. ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ ಎಂದರು.

ಕೋಲಾರದಲ್ಲಿ ಸ್ಪರ್ಧಿಸುತ್ತಾರೋ ಅಥವಾ ಬೇರೆಡೆ ನಿಲ್ಲುತ್ತಾರೋ ಅದು ಅವರಿಗೆ ಬಿಟ್ಟದ್ದು. ಆದರೆ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ, ಬಾದಾಮಿ ಬಿಟ್ಟು ಬೇರೆಡೆ ಸ್ಪರ್ಧಿಸುತ್ತಿದ್ದಾರೆ ಅಂದರೆ ಅವರಿಗೆ ಗೆಲ್ಲುವ ವಿಶ್ವಾಸವಿಲ್ಲ ಎಂದರ್ಥ. ಹಾಗಾಗಿ ಬೇರೆ ಕ್ಷೇತ್ರದತ್ತ ಮುಖಮಾಡಿದ್ದಾರೆ ಎಂದು ಟಾಂಗ್ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...