ರಾಜ್ಯದಲ್ಲಿ ಬಿಸಿಲಿನ ಬೇಗೆ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯ ಕಾವು ಕೂಡಾ ಏರತೊಡಗಿದ್ದು, ಕಲ್ಯಾಣ ರಾಜ್ಯ ಪ್ರಗತಿಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಈಗಾಗಲೇ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಮೇ 10ರೊಳಗೆ ಒಟ್ಟು 30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಆಗಲಿದೆ ಎಂದು ಅವರು ತಿಳಿಸಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಜನಾರ್ದನ ರೆಡ್ಡಿ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಈ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಪ್ತ ಗೆಳೆಯ ಶ್ರೀರಾಮುಲು ವಿರುದ್ಧ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದ್ದು, ಶ್ರೀರಾಮುಲು ವಿರುದ್ಧ ಪಕ್ಷದ ಅಭ್ಯರ್ಥಿ ನಿಲ್ಲಿಸುವ ವಾತಾವರಣವಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.