ಕಲಬುರ್ಗಿ: ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಕೆಎಂಎಫ್ ಏರಿಕೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆ ಈಗ ಗೊಂದಲಕ್ಕೆ ಕಾರಣವಾಗಿದೆ.
ಕಲಬುರ್ಗಿಯ ಸೇಡಂ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನವೆಂಬರ್ 20ರ ಬಳಿಕ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಜನರಿಗೆ ಹೊರೆಯಾಗದಂತೆ ಚರ್ಚಿಸಿ ದರ ನಿಗದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಕೆಎಂಎಫ್ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಆದರೆ ಸಿಎಂ ಬೊಮ್ಮಾಯಿ ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.
ಕಳೆದ ಬಾರಿ ನಡೆದ ಸಭೆಯಲ್ಲಿಯೇ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ಪ್ರೋತ್ಸಾಹ ಧನವನ್ನಾಗಿ ನೀಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರುವುದು ಖಚಿತ ಎಂದು ಹೇಳಲಾಗುತ್ತಿದೆ.